
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಜನವರಿ ಆರಂಭದಲ್ಲಿ ಚಳಿ ಪ್ರಮಾಣ ಕಡಿಮೆ ಆಗಿತ್ತು. ಆದರೆ ಇದೀಗ ಮತ್ತೆ ಹೆಚ್ಚಾಗಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಜನವರಿ ಅಂತ್ಯಕ್ಕೆ ಚಳಿ ಮತ್ತಷ್ಟು ಹೆಚ್ಚಾಗಲಿದೆ ಎನ್ನಲಾಗಿದೆ.
ಮುಂದಿನ ಒಂದು ವಾರ ಚಳಿಯ ವಾತಾವರಣ ಮುಂದುವರಿಯಲಿದ್ದು 10 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ದಟ್ಟವಾದ ಮಂಜು ಆವರಿಸಲಿದೆ ಎನ್ನಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ವಿಜಯಪುರ, ಬಾಗಲಕೋಟೆ, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ, ಬಳ್ಳಾರಿ, ಧಾರವಾಡ, ಗದಗ, ಹಾವೇರಿ ಮತ್ತು ವಿಜಯನಗರದಲ್ಲಿ ಚಳಿ ಜತೆ ಒಣ ಹವಾಮಾನವಿದ್ದು ಈ ವಾರವೂ ಇದೇ ವಾತಾವರಣ ಮುಂದುವರೆಯಲಿದೆ. ಜತೆಗೆ ಮೋಡ ಕವಿದ ವಾತಾವರಣ ಸಹ ಇರಲಿದೆ.
ಮಕ್ಕಳು, ಹಿರಿಯರು, ಮಹಿಳೆಯರು ಹವಾಮಾನ ಬದಲಾವಣೆಯಿಂದ ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ.ಆರೋಗ್ಯದ ಬಗ್ಗೆ ಜನರು ಎಚ್ಚರವಹಿಸಬೇಕು. ಈ ಸಂದರ್ಭದಲ್ಲಿ ಶೀತ, ಕೆಮ್ಮು ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

