Kannada NewsKarnataka NewsLatest

*ರಾಜ್ಯಪಾಲರ ನಡೆಗೆ ಆಕ್ರೋಶ: ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನ: ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುವ ಮೂಲಕ ಸಂವಿಧಾನಕ್ಕೆ ಹಾಗೂ ಕರ್ನಾಟಕ ವಿಧಾನಸಭೆಗೆ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಪ್ರತಿಭಟನೆ ನಡೆಸಿರುವ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲರ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯಪಾಲರು ಅಧಿವೇಶನದಲ್ಲಿ ಭಾಷಣ ಓದದೇ ಅಸಂವಿಧಾನಿಕ ನಡೆ ಅನುಸರಿಸಿದ್ದಾರೆ. ಅಲ್ಲದೇ ಕೇಂದ್ರ ಬಿಜೆಪಿ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಇಂತಹ ರಾಅಜ್ಯಪಾಲರು ನಮಗೆ ಬೇಡ ಎಂದು ಕಾಂಗ್ರೆಸ್ ಕಾರ್ಯಕರ್ತರು ಕಿಡಿಕಾರಿದ್ದಾರೆ. ಇದೇ ವೇಳೆ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

Home add -Advt

Related Articles

Back to top button