Kannada NewsKarnataka NewsLatest

*ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್*

ಪ್ರಗತಿವಾಹಿನಿ ಸುದ್ದಿ: ಬೈಕ್ ಟ್ಯಾಕ್ಸಿಗಳ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಇನ್ಮುಂದೆ ಬೈಕ್ ಟ್ಯಾಕ್ಸಿಗಳು ಮತ್ತೆ ಪುನರಾಂಭವಾಗಲಿವೆ.

ಬೈಕ್ ಟ್ಯಾಕ್ಸಿ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿರುವ ಹೈಕೋರ್ಟ್, ಬೈಕ್ ಟ್ಯಾಕ್ಸಿಗಳಿಗೆ ಲೈಸನ್ಸ್ ನೀಡುವುದನ್ನು ಸರ್ಕಾರ ನಿರಾಕರಿಸುವಂತಿಲ್ಲ. ಬೈಕ್ ಟ್ಯಾಕ್ಸಿ ಅಗ್ರಿಗೇಟರ್ ಗಳು ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ ಆ ಅರ್ಜಿಯನ್ನು ಪರಿಗಣಿಸಿ ಪರವಾನಗಿ ನೀಡಬೇಕು ಎಂದು ಹೈಕೋರ್ಟ್ ಸ್ಪಷ್ಟವಾಗಿ ತಿಳಿಸಿದೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ. ಬೈಕ್ ಟ್ಯಾಕ್ಸಿ ಸೇವೆಗಳು ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಒಂದು ಬಹಗವಾಗಿದ್ದು, ಕಾನೂನು ಚೌಕಟ್ಟಿನೊಳಗೆ ಅವುಗಳನ್ನು ನಿರ್ಬಂಧಿಸುವಂತಿಲ್ಲ ಎಂದು ಅಭಿಪ್ರಾಯಪಟ್ಟಿದೆ.

Home add -Advt

Related Articles

Back to top button