Kannada NewsKarnataka NewsLatest

*ಬಸ್ ಹಾಗೂ ಕ್ರೂಸರ್ ನಡುವೆ ಡಿಕ್ಕಿ: ಮೂವರ ಸಾವು*

ಪ್ರಗತಿವಾಹಿನಿ ಸುದ್ದಿ: ಬಸ್‌ ಹಾಗೂ ಕ್ರೂಸರ್ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟ ದುರ್ಘಟನೆ ನಡೆದಿದೆ.

 ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಗ್ರಾಮದ ಸಮೀಪ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಈ ಘಟನೆ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದು, 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ತೀವ್ರತೆಯಿಂದ ವಾಹನಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿವೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಇನ್ನು ಮೃತಪಟ್ಟವರ ಗುರುತು ಪತ್ತೆ ಸಿಗಬೇಕಿದೆ.

Home add -Advt

Related Articles

Back to top button