Kannada NewsKarnataka NewsLatest

*BREAKING: ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ: 6 ಅಪ್ರಾಪ್ತರು ಸೇರಿ 8 ಯುವಕರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬಳ್ಳಾರಿಯಲ್ಲಿ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ಹಚ್ಚಿದ ಪ್ರಕರಣ ಸಂಬಂಧ 8 ಯುವಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಬಳ್ಳಾರಿ ಹೊರವಲಯದಲ್ಲಿರುವ ಜನಾರ್ಧನ ರೆಡ್ಡಿ ಹಾಗೂ ಶ್ರೀರಾಮುಲುಗೆ ಸೇರಿದ ರೆಡ್ಡಿ ಮಾಡೆಲ್ ಹೌಸ್ ನಲ್ಲಿ ನಿನ್ನೆ ಸಂಜೆ ಬೆಂಕಿ ಅವಘಡ ಸಂಭವಿಸಿತ್ತು. ಇದೀಗ ಪ್ರಕರಣ ಸಂಬಂಧ 8 ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆದವರಲ್ಲಿ 6 ಜನ ಅಪ್ರಾಪ್ತರಾಗಿದ್ದಾರೆ. ಒಟ್ಟು 8 ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಮಾಡೆಲ್ ಹೌಸ್ ಗೆ ಬೆಂಕಿ ಪ್ರಕರಣದ ಬೆನ್ನಲ್ಲೇ ಶಾಸಕ ಸೋಮಶೇಖರ್ ರೆಡ್ಡಿ, ಇದು ಕಾಂಗ್ರೆಸ್ ನ ಕೃತ್ಯ. ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಬೆಂಬಲಿಗರು ನಮ್ಮ ಮಾಡೆಲ್ ಹೌಸ್ ಗೆ ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಿದ್ದರು.

Home add -Advt

Related Articles

Back to top button