Kannada NewsKarnataka NewsLatestPolitics
*ಸಿಎಂ ಭಾಗಿಯಾಗಬೇಕಿದ್ದ ಕಾರ್ಯಕ್ರಮದ ಕಟೌಟ್ ಕುಸಿದು ಅವಘಡ: ಮೂವರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಕೊಳಗೇರಿ ಅಭಿವೃದ್ಧಿ ಮಂಡಳಿ ಹಮ್ಮಿಕೊಂಡಿದ್ದ ಮನೆ ಹಂಚಿಕೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ವೇದಿಕೆ ಮುಂಭಾಗ ಅಳವಡಿಸಿದ್ದ ಬೃಹತ್ ಕಟೌಟ್ ಕುಸಿದು ಬಿದ್ದು ಮೂವರು ಗಂಭೀರವಗೈ ಗಾಯಗೊಂಡಿರುವ ಘಟನೆ ನಡೆದಿದೆ.
ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆ ಹಂಚಿಕೆ ಹಾಗೂ ಹಕ್ಕುಪತ್ರ ವಿತರೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೃಹತ್ ವೇದಿಕೆ ಸಿದ್ಧಪಡಿಸಲಾಗಿದ್ದು, ವೇದಿಕೆ ಮುಂಭಾಗ ಹಾಕಿದ್ದ ಬೃಹತ್ ಕಟೌಟ್ ಏಕಾಏಕಿ ಕುಸಿದು ಬಿದ್ದಿದೆ, ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಓರ್ವ ಮಹಿಳೆ ಇದ್ದು, ಅವರನ್ನು ಶಾರದಾ ಕಟ್ಟಿ ಎಂದು ಗುರುತಿಸಲಾಗಿದೆ.

