
ಪ್ರಗತಿವಾಹಿನಿ ಸುದ್ದಿ: ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಓರ್ವನನ್ನು ಬಂಧಿಸಲಾಗಿದೆ.
ಬೆಂಗಳೂರಿನಲ್ಲಿ ಈ ಘಟನೆ ನಡೆದಿದೆ. ಆರ್.ಟಿ.ನಗರದ ಪೊಲೀಸ್ ಕಾನ್ಸ್ ಟೇಬಲ್ ಯಮುನಾ ನಾಯಕ್ ಬಂಧಿತ ಆರೋಪಿ. ಪ್ರಥಮ ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿಸಲಾಗಿದೆ.
ಫ್ರೀಡಂಪಾರ್ಕ್ ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸ್ ಕಾನ್ಸ್ ಟೇಬಲ್ ಯಮುನಾ ನಾಯಕ್, ಪ್ರಥಮ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತ ವಿದ್ಯಾಅರ್ಥಿನಿ ಉಪ್ಪಾರಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದಳು.
ಪೋಕ್ಸೋ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಪಿಸಿ ಯಮುನಾ ನಾಯಕ್ ನನ್ನು ಬಂಧಿಸಿದ್ದಾರೆ.


