
ಪ್ರಗತಿವಾಹಿನಿ ಸುದ್ದಿ: ಫೋನ್ ಪೇ ಮೂಲಕ ಲಂಚ ಸ್ವೀಕರಿಸುತ್ತಿದ್ದಾಗಲೇ ಕಂದಾಯ ಇಲಾಖೆಯ ಎಫ್ ಡಿಎ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕಂದಾಯ ಇಲಾಖೆ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಸತೀಶ್ ಕುಮಾರ್ ರಾಠೋಡ್ ಲೋಕಾಯುಕ್ತ ಬಲೆಗೆ ಬಿದ್ದ ಎಫ್ ಡಿಎ.
ಕಂದಾಯ ಇಲಾಖೆ ಕಚೇರಿಯಲ್ಲಿಯೇ ಸತೀಶ್ ರಾಠೋಡ್, ಫೋನ್ ಪೇ ನಲ್ಲಿ 10 ಸಾವಿರ ರೂಪಾಯಿ ಲಂಚ ಸ್ವೀಕರಿಸಿದ್ದರು. ಇದೇ ವೇಳೆ ಲೋಕಾಯುಕ್ತ ಎಸ್ ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ಇನ್ಸ್ ಪೆಕ್ಟರ್ ಅರುಣ್ ಕುಮಾರ್ ತಂಡ ದಾಳಿ ನಡೆಸಿದ್ದು, ಸತೀಶ್ ರಾಠೋಡ್ ನನ್ನು ಬಂಧಿಸಿದೆ.


