Belagavi NewsBelgaum NewsKarnataka NewsLatestPolitics
*ಬೆಳಗಾವಿಯಲ್ಲಿ 400 ಕೋಟಿ ದರೋಡೆ ಪ್ರಕರಣ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಚೋರ್ಲಾ ಘಾಟ್ ಬಳಿ ಕಂಟೇನರ್ ನಲ್ಲಿ ಸಾಗಿಸುತ್ತಿದ್ದ 400 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಬೆಳಗಾವಿಯಲ್ಲಿ ನಡೆದ ದರೋಡೆ ಕೇಸ್ ವಿಚಾರವಾಗಿ ಮಹಾರಾಷ್ಟ್ರ ಪೊಲೀಸರು ನಮ್ಮ ಪೊಲೀಸರಿಗೆ ಪತ್ರ ಬರೆದಿದ್ದಾರೆ. ತನಿಖೆಗೆ ನಮ್ಮ ಸಹಕಾರ ಬೇಕು ಎಂದು ಕೇಳಿದ್ದಾರೆ. ಈ ಪ್ರಕರಣದ ಬಗ್ಗೆ ನಾನೂ ಮಾಹಿತಿ ನೀಡಲು ಕೇಳಿದ್ದೇನೆ ಎಂದರು.
ತನಿಖೆ ಇನ್ನೂ ಆರಂಭಿಕ ಹಂತದಲ್ಲಿದೆ. ಹೆಚ್ಚಿನ ಮಾಹಿತಿ ಸಿಕ್ಕ ಬಳಿಕ ನಮ್ಮ ಪೊಲೀಸರು ಏನು ಕ್ರಮ ಕೈಗೊಳ್ಳಬೇಕೋ ಕೈಗೊಳ್ಳುತ್ತಾರೆ ಎಂದು ಹೇಳಿದರು.




