
ಪ್ರಗತಿವಾಹಿನಿ ಸುದ್ದಿ: ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿದರು.

ಶ್ರೀ ಕೃಷ್ಣನ ದರ್ಶನ ಪಡೆದ ಸಚಿವರು, ಬಳಿಕ ಪರ್ಯಾಯ ಪೀಠ ಅಲಂಕರಿಸಿರುವ ಶೀರೂರು ಮಠದ ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ಅವರನ್ನು ಸನ್ಮಾನಿಸಿ, ಆಶೀರ್ವಾದ ಪಡೆದರು.

ಈ ವೇಳೆ ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಪ್ರಸಾದ್ ಕಾಂಚನ್, ರಮೇಶ್ ಕಾಂಚನ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.




