*ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಪ್ರಕಟ: ಕನ್ನಡಿಗ ಪ್ರಭಾಕರ ಕೋರೆ, ಅಂಕೇಗೌಡ, ಎಸ್.ಜಿ.ಸುಶೀಲಮ್ಮ ಸೇರಿ ಹಲವು ಸಾಧಕರಿಗೆ ಪ್ರಶಸ್ತಿ*

ಪ್ರಗತಿವಾಹಿನಿ ಸುದ್ದಿ: 2026ನೇ ಸಾಲಿನ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಈ ಬಾರಿ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಕನ್ನಡಿಗರಾದ ಡಾ.ಪ್ರಭಾಕರ ಕೋರೆ, ಅಂಕೇಗೌಡ, ಡಾ.ಎಸ್.ಜಿ.ಸುಶೀಲಮ್ಮ ಕೂಡ ಈ ಬಾರಿಯ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಪ್ರಭಾಕರ ಕೋರೆ ಬೆಳಗಾವಿಯ ಕೆಎಲ್ಇ ಸಂಸ್ಥೆಯ ಮೂಲಕ ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ.
ಅಂಕೇಗೌಡ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದವರು. 20 ಲಕ್ಷಕ್ಕೂ ಹೆಚ್ಚು ಪುಸ್ತಗಳನ್ನು ಸಂಗ್ರಹಿಸಿ ಪುಸ್ತಕ ಮನೆ ಎಂಬ ಗ್ರಂಥಾಲಯನ್ನು ನಿರ್ಮಿಸಿದ್ದಾರೆ. ಅಂಕೇಗೌಡ ಅವರ ಅಪೂರ್ವ ಸಾಧನೆಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.
ಎಸ್.ಜಿ.ಸುಶೀಲಮ್ಮ ಸಮಾಜಸೇವಕಿ. ಬೆಂಗಳೂರಿನ ಸುಮಂಗಲಿ ಸೇವಾ ಆಶ್ರಮದ ಸಂಸ್ಥಾಪಕಿ. ಮಹಿಳಾ ಸಬಲೀಕರಣ, ಶಿಶು ಸಂರಕ್ಷಣೆ, ಬಡವರ ಕಲ್ಯಾಣ, ಮಹಿಳಾ ಒಕ್ಕೂಟಗಳ ರಚನೆ, ಸ್ವಯಂ ಉದ್ಯೋಗ ತರಬೇತಿಗಳನ್ನು ತಮ್ಮ ಸಂಸ್ಥೆಗಳಿಂದ ನೀಡಿ ಜನರ ಅಭಿವೃದ್ದಿಗಾಗಿ ಶ್ರಮಿಸುತ್ತಿರುವ ಹಿನ್ನೆಲೆಯಲ್ಲಿ ಸುಶೀಲಮ್ಮ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.




