Belagavi NewsBelgaum NewsKannada NewsKarnataka NewsLatestPolitics

*ರಾಷ್ಟ್ರನಿರ್ಮಾಣದಲ್ಲಿ ಯುವಕರ ಪಾತ್ರ ಬಹುದೊಡ್ಡದು: ಡಾ.ಪ್ರಭಾಕರ ಕೋರೆ*

ಕೆಎಲ್‌ಇ ಪ್ರಧಾನ ಕಚೇರಿಯಲ್ಲಿ ಧ್ವಜಾರೋಹಣ

ಪ್ರಗತಿವಾಹಿನಿ ಸುದ್ದಿ: ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವ ಭಾರತ ಇಂದು ಜಾಗತಿಕವಾಗಿ ಪ್ರಕಾಶಿಸುತ್ತಿದ್ದು, ದೂರದೃಷ್ಟಿಯ ನಾಯಕರಿಂದ ಸ್ವಾತಂತ್ರ್ಯ ಪಡೆದು, ತನ್ನದೇ ಆದ ಸಂವಿಧಾನವನ್ನು ಅನುಷ್ಠಾನಗೊಳಿಸುವ ಮೂಲಕ ಪ್ರಬಲ ರಾಷ್ಟ್ರವಾಗಿ ಬೆಳೆದುನಿಂತಿದೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆ ಅವರು ಹೇಳಿದರು.

ಅವರು ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ 77ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಸಂವಿಧಾನವನ್ನು ಅರಿಯುವುದು ಹಾಗೂ ಅದಕ್ಕೆ ಗೌರವ ನೀಡುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ ಎಂದು ಅವರು ತಿಳಿಸಿದರು.

Home add -Advt

ಇಂದು ಭಾರತ ಆತ್ಮನಿರ್ಭರ ಭಾರತದತ್ತ ದೃಢ ಹೆಜ್ಜೆ ಇಟ್ಟಿದ್ದು, ಆಧುನಿಕ ಜಗತ್ತಿನ ಎಲ್ಲ ಅಗತ್ಯಗಳಿಗೆ ಸ್ಪಂದಿಸುವ ಶಕ್ತಿಯನ್ನು ಹೊಂದಿದೆ. ರಾಷ್ಟ್ರವು ಎದುರಾಳಿಗಳಿಗೆ ಸಿಂಹಸ್ವಪ್ನವಾಗಿದ್ದು, ತಂತ್ರಜ್ಞಾನ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆದಿದೆ. ಯುವಪೀಳಿಗೆ ಅತ್ಯುತ್ತಮ ಶಿಕ್ಷಣ ಪಡೆದು ರಾಷ್ಟ್ರ ನಿರ್ಮಾಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಕೆಎಲ್‌ಇ ನಿರ್ದೇಶಕಿ ಡಾ.ಪ್ರೀತಿ ದೊಡವಾಡ, ಕಾರ್ಯದರ್ಶಿಗಳಾದ ಡಾ.ಬಿ.ಜಿ.ದೇಸಾಯಿ, ಜಂಟಿ ಕಾರ್ಯದರ್ಶಿಗಳಾದ ಡಾ.ಸುನೀಲ ಜಲಾಲಪುರೆ, ಡಾ.ಪ್ರಕಾಶ ಕಡಕೋಳ ಹಾಗೂ ಸಂಸ್ಥೆಯ ಆಜೀವ ಸದಸ್ಯರು ಉಪಸ್ಥಿತರಿದ್ದರು.

ಪದ್ಮಶ್ರೀ ಪ್ರಭಾಕರ ಕೋರೆ ಅವರಿಗೆ ಅಭಿನಂದನೆಗಳ ಮಹಾಪೂರ :

ಕೆಎಲ್‌ಇ ಪ್ರಧಾನ ಕಚೇರಿಯಲ್ಲಿ ಡಾ.ಪ್ರಭಾಕರ ಕೋರೆಯವರಿಗೆ ಕಾರ್ಯದರ್ಶಿಗಳಾದ ಡಾ.ಬಿ.ಜಿ.ದೇಸಾಯಿಯವರು ಹೂಗುಚ್ಛ ನೀಡಿ ಅಭಿನಂದಿಸಿದರು.

ಅಂತೆಯೇ ಬೆಳಗಾವಿ ಜಿಲ್ಲಾ ಕ್ರೀಡಾಂಣದಲ್ಲಿ ಜರುಗಿದ ಗಣರಾಜ್ಯೋತ್ಸವದಲ್ಲಿ ಜಿಲ್ಲಾಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ, ಡಿ.ಸಿ.ಮೋಹಮ್ಮದ ರೋಷನ್‌, ಪೋಲೀಸ್‌ ಕಮೀಶನರ್‌ ಭೂಷಣ ಭೋರಸೆ ಮೊದಲಾದವರು ಉಪಸ್ಥಿತರಿದ್ದರು.

Related Articles

Back to top button