CrimeKarnataka NewsLatest

*ಹಿಟ್ ಆ್ಯಂಡ್ ರನ್ ಗೆ ಮಹಿಳೆ ಬಲಿ: ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ: ಪ್ರವಾಸಿ ವಾಹನ ಡಿಕ್ಕಿಯಾಗಿ ಕೃಷಿ ಪತ್ತಿನ ಸಹಕಾರ ಸಂಘದ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರಿನ ಆಲ್ಲೂರಿನಲ್ಲಿ ಅಪಘಾತ ನಡೆದಿದೆ. ಮೃತರನ್ನು ನವಮಿ (26) ಎಂದು ಗುರುತಿಸಲಾಗಿದೆ. ಇವರು ಆಲ್ಲೂರು ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೆಲಸ ಮಾಡುತ್ತಿದ್ದರು. 

ಘಟನೆ ನಡೆದ ವೇಳೆ ವಾಹನ ನಿಲ್ಲಿಸದೇ ಚಾಲಕ ಪರಾರಿಯಾಗಿದ್ದಾನೆ. ಅಪಘಾತ ಎಸಗಿದ ವಾಹನ ತುಮಕೂರು ಜಿಲ್ಲೆಯ ತಿಪಟೂರು ಮೂಲದ್ದು ಎಂದು ತಿಳಿದು ಬಂದಿದೆ.

ಘಟನೆ ಕುರಿತು ಆಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದಿಂದ ಮಹಿಳೆ ಸಾವನ್ನಪ್ಪಿದ ಹಿನ್ನೆಲೆ, ಆಲೂರು ಹೋಬಳಿಯಲ್ಲಿನ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಮುಂದೂಡಲಾಗಿದೆ.

Home add -Advt

Related Articles

Back to top button