Belagavi NewsBelgaum NewsKannada NewsKarnataka NewsNational
*ಮುಂದಿನ ಎರಡು ದಿನ ಜಿಟಿಜಿಟಿ ಮಳೆ ಜೊತೆ ಚಳಿ: ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ತುಂತುರು ಮಳೆಯಾಗಿದ್ದು ಇವತ್ತು ಕೂಡ ಚಳಿಯ ಜೊತೆ ಮಳೆ ಮುಂದುವರಿಯಲಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸೋಮವಾರ ಜಿಟಿಜಿಟಿ ಮಳೆಯಾಗಿದ್ದು, ಕೆಲವು ಕಡೆ ಮೋಡ ಕವಿದ ವಾತಾವರಣ ಕಂಡುಬಂದಿದೆ.
ಉಳಿದಂತೆ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮಂಡ್ಯ, ಕೊಡಗು, ಚಾಮರಾಜನಗರ, ಮೈಸೂರು ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ಮುಂದಿನ ಎರಡು ದಿನ ತುಂತುರು ಮಳೆಯಾಗಲಿದೆ.
ಕೆಲವು ಜಿಲ್ಲೆಗಳಲ್ಲಿ ಜನವರಿ 28ರ ವರೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಒಂದೆರಡು ದಿನದ ನಂತರ ಬಿಸಿಲಿನ ವಾತಾವರಣ ಮರುಕಳಿಸುತ್ತದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.


