
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಸಾಲು ಸಾಲು ದರೋಡೆ ಪ್ರಕರಣಗಳು ನಡೆದಿರುವ ಬೆನ್ನಲ್ಲೇ ಪಕ್ಕದ ರಾಜ್ಯ ಆಂಧ್ರಪ್ರದೇಶದ ಶ್ರೀಶೈಲಂ ದೇವಾಲಯದ ಬಳಿ ಬ್ಯಾಗ್ ವೊಂದರಲ್ಲಿ 30 ಲಕ್ಷ ಹಣ ಪತ್ತೆಯಾಗಿರುವ ಘಟನೆ ನಡೆದಿದೆ.
ದೇವಸ್ಥಾನದ ಬಳಿ ಭದ್ರತಾ ಸಿಬ್ಬಂದಿಗಳು ತಪಾಸಣೆ ನಡೆಸುತ್ತಿದ್ದಾಗ ಕಾರಿನಲ್ಲಿ ಬ್ಯಾಗ್ ವೊಂದರಲ್ಲಿ ೩೦ ಲಕ್ಷ ಹಣ ಪತ್ತೆಯಾಗಿದೆ. ಶ್ರೀಶೈಲಂ ದೇವಾಲಯಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ಅದರಲ್ಲಿಯೂ ಶಿವರಾತ್ರಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬ್ರಹ್ಮೋತ್ಸವ ಹಿನ್ನೆಲೆಯಲ್ಲಿ ಸಾಗರೋಪಾದಿಯಲ್ಲಿ ಯಾತ್ರಿಕರು ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಯಾತ್ರಿಕರ ವಾಹನ, ತಪಾಸಣೆ ಹೆಚ್ಚಿಸಲಾಗಿದೆ.
ಹೀಗೆ ಭದ್ರತಾ ಸಿಬ್ಬಂದಿಗಳು ದೇವಾಲಯದ ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಕಿಯಾ ಕಾರಿನಲ್ಲಿ ಹಣ ತುಂಬಿದ್ದ ಬ್ಯಾಗ್ ಪತ್ತೆಯಾಗಿದೆ. ಅದರಲ್ಲಿ ೩೦ ಲಕ್ಷ ರೂಪಾಯಿ ಹಣ ಸಿಕ್ಕಿದೆ. ಕಾರ್ ಚಾಲಕ ಹಾಗೂ ಜೊತೆಗಿದ್ದ ಪ್ರಯಾಣಿಕರನ್ನು ವಿಚಾರಿಸಿದಾಗ ನಾವು ಚಿನ್ನದ ವ್ಯಾಪಾರಿಗಳು ದೇವರ ದರ್ಶನಕ್ಕೆ ಬಂದಿದದಗಿ ತಿಳಿಸಿದ್ದಾರೆ. ಆದರೆ ಹಣದ ಮೂಲದ ಬಗ್ಗೆ ದಾಖಲೆ ನೀಡುವಲ್ಲಿ ವಿಫಲರಾಗಿದ್ದು, ಘಟನ ಅಸ್ಥಳಕ್ಕೆ ಆಗಮಿಸಿದ ಶ್ರೀಶೈಲಂ ಪೊಲೀಸರು ಹಣವನ್ನು ಜಪ್ತಿ ಮಾಡಿ, ಇಬ್ಬರನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ.




