Belagavi NewsBelgaum NewsKannada NewsKarnataka NewsNationalPolitics
*ಲಂಚಕ್ಕೆ ಬೇಡಿಕೆ: ತಹಶಿಲ್ದಾರ ಕಚೇರಿ ಮೇಲೆ ದಾಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪದಡಿ ರಾಯಬಾಗ ತಾಲೂಕಿನ ತಹಶಿಲ್ದಾರ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದ ರೈತ ಶಿವಾನಂದ ದುಂಡಗಿ ಅವರ ಅಜ್ಜನಿಗೆ 1974 ರಲ್ಲಿ ಭೂ ನ್ಯಾಯಮಂಡಳಿ ಆದೇಶದಂತೆ ಮಂಜೂರಾದ ಜಮೀನನ್ನು ಕನಿಷ್ಠ 15 ವರ್ಷಗಳವರೆಗೆ ಪರಬಾರೆ ಮಾಡಬಾರದು ಎಂದಹ ಪಹಣಿಯಲ್ಲಿದ್ದ ನಿರ್ಬಂಧವನ್ನು ತೆಗೆದು ಆದೇಶ ಮಾಡಿ ಕೊಡುವಂತೆ ರಾಯಬಾಗ ತಹಸೀಲ್ದಾರ್ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದರು.
ಈ ಪ್ರಕರಣ ಸಂಬಂಧಪಟ್ಟ ಅರ್ಜಿಯ ಮೇಲೆ ಕ್ರಮ ಜರುಗಿಸಿ ತಹಸೀಲ್ದಾರ್ ರಾಯಬಾಗರವರಿಂದ ಆದೇಶ ಮಾಡಿಸಿ ಕೊಡಲು ಕೇಸವರ್ಕರ್ ಚಂದ್ರಮಪ್ಪ ಮೋರಟಗಿ ರೂ 80,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಸದ್ಯ ಈ ಪ್ರಕರಣದ ಕುರಿತು ತನಿಖೆ ಮುಂದು ವರೆದಿದೆ.



