LatestNational

ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಸಂತಾಪ

  • ಬೆಂಗಳೂರು: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಸಂತಾಪ ಸೂಚಿಸಿದ್ದಾರೆ.

ಅಜಿತ್ ಪವಾರ್ ಅವರು ಮಹಾರಾಷ್ಟ್ರದ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದರು. ಜೊತೆಗೆ ಸುದೀರ್ಘ ಕಾಲ ಉಪ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಾಖಲೆ ಹೊಂದಿದ್ದರು. ಮಹಾರಾಷ್ಟ್ರ ರಾಜಕೀಯ ವಲಯದಲ್ಲಿ ಅಜಿತ್‌ ದಾದಾ ಎಂದೇ ಹೆಸರಾಗಿದ್ದರು. ಮಹಾರಾಷ್ಟ್ರದ ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ ಪತನಗೊಂಡ ಸುದ್ದಿಕೇಳಿ ಅಘಾತವಾಯಿತು ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ರಾಜಕೀಯ ವಲಯದಲ್ಲಿ ತಮ್ಮದೇ ಆದ ಹಿಡಿತ ಹೊಂದಿದ್ದ ಅಜಿತ್‌ ದಾದಾ, ಅವರ ನಿಧನದ ಸುದ್ದಿಯನ್ನು ತಡೆದುಕೊಳ್ಳುವ ಶಕ್ತಿಯನ್ನು ಆ ದೇವರು, ಅವರ ಕುಟುಂಬ ವರ್ಗದವರಿಗೆ, ಅಭಿಮಾನಿಗಳಿಗೆ, ಎನ್‌ಸಿಪಿ (ಎಪಿ) ಪಕ್ಷದ ಕಾರ್ಯಕರ್ತರಿಗೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

Related Articles

Back to top button