
ಪ್ರಗತಿವಾಹಿನಿ ಸುದ್ದಿ: ಗುತ್ತಿಗೆದಾರರು ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದಿದ್ದಾರೆ. ಬಾಕಿ ಬಿಲ್ ಪಾಅವತಿಸುವಂತೆ ಒತ್ತಾಯಿಸಿದ್ದು, ಸರ್ಕಾರಕ್ಕೆ ಗಡುವು ನೀಡಿದ್ದಾರೆ.
ಮಾರ್ಚ್ 5ರೊಳಗೆ ಗುತ್ತಿಗೆದಾರರ ಬಾಕಿ ಬಿಲ್ ಹಣ ಪಾವತಿ ಮಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಾಮಗಾರಿಗಳನ್ನು ಸ್ಥಗಿತಗೊಳಿ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್, ಬಾಕಿ ಉಳಿದಿರುವ 37,370 ಕೋಟಿ ರೂಪಾಯಿಗಳ ವಿವರ ಬಿಡುಗಡೆ ಮಾಡ್ದರು. ಸಣ್ಣ ನೀರಾವರಿ ಇಲಾಖೆ, ನಗರಾಭಿವೃದ್ಧಿ ಇಲಾಖೆ, ವಸತಿ ಇಲಾಖೆ, ಕಾರ್ಮಿಕ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಗುತ್ತಿಗೆದರರಿಗೆ ಬಾಕಿ ಹಣ ಬಿಡುಗಡೆ ಮಾಡಬೇಕಿದೆ. ತಕ್ಷಣ ಸರ್ಕಾರ ಬಿಲ್ ಹಣ ಬಿಡುಗಡೆ ಮಾಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ತಿಳಿಸಿದರು.
ಹತ್ತು ಮಹಾನಗರ ಪಾಲಿಕೆಗಳಲ್ಲಿ ಕಾರ್ಮಿಕ ಇಲಕಹೆಯಲ್ಲಿ ಸ್ಥಳೀಯ ಗುತ್ತಿಗೆದಾರರಿಗೆ ಅನ್ಯಾಯವಾಗುವಂತೆ ಪ್ಯಾಕೆಜ್ ಟೆಂಡರ್ ಮಾಡಲಾಗುತ್ತಿದೆ ಆರ್.ಟಿ.ನಗರ, ರಾಜಾಜಿನಗರದ ಖಾಸಗಿ ಕಚೇರಿಗಳಲ್ಲಿ ಕುಳಿತುಟೆಂಡರ್ ಹಂಚಿಕೆ ಮಾಡಲಾಗುತ್ತಿದೆ ಎಂದು ದೂರಿದ್ದಾರೆ.




