Belagavi NewsBelgaum NewsKannada NewsKarnataka NewsNationalPolitics
*ಕಸ ವಿಲೇವಾರಿ ಘಟಕ ಸ್ಥಾಪನೆಗೆ ವಿರೋಧಿಸಿ ಬೃಹತ್ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ತಾಲೂಕಿನ ಮಚ್ಚೆ ಪಟ್ಟಣ ಪಂಚಾಯತಿ ವ್ಯಾಪ್ತಿ ಖದರವಾಡಿ ಗ್ರಾಮದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ ಮಾಡಲಾಗುತ್ತಿದ್ದು, ಇದನ್ನು ವಿರೋಧಿಸಿ ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಲಾಯಿತು.
ಇಂದು ಬೆಳಗಾವಿ ನಗರದ ಖಡೇಬಜಾರ ಪೊಲೀಸ್ ಠಾಣೆ ಮುಂದಿನಿಂದ ತಹಶಿಲ್ದಾರರ ಕಚೇರಿ ವರೆಗೆ ಪಾದ ಯಾತ್ರೆ ನಡೆಸಿ ಘೋಷಣೆ ಕೂಗಿ ಪ್ರತಿಭಟನೆ ನಡೆಸಿ, ಬೆಳಗಾವಿ ತಹಶಿಲ್ದಾರರ ಬಸವರಾಜ ನಾಗರಾಳಗೆ ಮನವಿ ಮಾಡಲಾಯಿತು.
ಯಾವುದೇ ಕಾರಣಕ್ಕೂ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ ಆಗಬಾರದು. ಖಾದವಾಡಿ ಗ್ರಾಮದಲ್ಲಿ ಐದು ಎಕರೆ ಪ್ರದೇಶದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ ಮಾಡ್ತಿದ್ದಾರೆ ಈ ಕೂಡಲೇ ಅದನ್ನ ರದ್ದು ಪಡಿಸಬೇಕು. ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ ಮಾಡುತ್ತಿರುವ ಜಾಗೆಯಲ್ಲಿ 500 ಮೀಟರ್ ವ್ಯಾಪ್ತಿಯಲ್ಲಿ ಶಾಲೆಗಳು, ಕೆರೆ, ಫಲವತ್ತಾದ ಜಮೀನು ಇದೆ. ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ ಆದರೆ ಎಲ್ಲರಿಗೂ ಸಮಸ್ಯೆ ಆಗುತ್ತೆ ಎಂದು ಆಕ್ರೋಶ ಹೊರ ಹಾಕಿದರು.



