
ಇನ್ಮುಂದೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಜಾಹೀರಾತುಗಳು ಬ್ಯಾನ್
ಪ್ರಗತಿವಾಹಿನಿ ಸುದ್ದಿ: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತಿಗೆ ನಿರ್ಬಂಧ ವಿಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ.
ನಾಲ್ಕು ಸಾರಿಗೆ ನಿಗಮಗಳ ಬಸ್ಸು ಹಾಗೂ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ ಪರೋಕ್ಷವಾದ ಜಾಹೀರಾತುಗಳನ್ನು ನಿರ್ಬಂಧಿಸಲಾಗಿದೆ. ಈಗಾಗಲೇ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸಿದ್ದರೆ ಅವುಗಳನ್ನು ತೆಗೆದುಹಾಕುವಂತೆ ಸಂಬಂಧಪಟ್ಟವರಿಗೆ ಕಟ್ಟುನಿಟ್ಟಿ ನಿಟ್ಟಿನ ಸೂಚನೆಯನ್ನು ನೀಡಿದ್ದಾರೆ.


