
ಪ್ರಗತಿವಾಹಿನಿ ಸುದ್ದಿ: ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹರಡುವ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದ ಮೇಲೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ.
ಬ್ರಹ್ಮಾವರದ ವಾರಂಬಳ್ಳಿ ಗ್ರಾಮದ ಸಂತೋಷ್ ಕುಮಾರ್ ಶೆಟ್ಟಿ (56) ಮತ್ತು ಕೋಟೇಶ್ವರ ಗ್ರಾಮದ ಕೆ. ನಾಗರಾಜ್ (62) ಎಂದು ಗುರುತಿಸಲಾಗಿದೆ.
ಸಂತೋಷ್ ಕುಮಾರ್ ಅವರು ಖಾಸಗಿ ಸಹಕಾರಿ ಬ್ಯಾಂಕ್‌ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರೆ, ನಾಗರಾಜ್ ಅವರು ಉದ್ಯಮಿಯಾಗಿದ್ದಾರೆ.
ಬಂಧಿತರು ಸಾಮಾಜಿಕ ಜಾಲತಾಣಗಳಲ್ಲಿ ಎರಡು ಧರ್ಮಗಳ ನಡುವೆ ದ್ವೇಷವನ್ನು ಉಂಟುಮಾಡುವ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರುವಂತಹ ಆಕ್ಷೇಪಾರ್ಹ ವಿಡಿಯೋ ಮತ್ತು ಸಂದೇಶಗಳನ್ನು ಹಂಚಿಕೊಂಡಿದ್ದರು ಎಂಬ ಆರೋಪವಿದೆ
ಜನವರಿ 29 ರಂದು ಇವರ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 196(1), 353(2) ಮತ್ತು 3(5) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
