
ಪ್ರಗತಿವಾಹಿನಿ ಸುದ್ದಿ: ಲಂಚ ಪಡೆಯುತ್ತಿದ್ದಾಗಲೇ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಚಿಕ್ಕಜಂಬೂರು ಗ್ರಾಮ ಲೆಕ್ಕಾಧಿಕಾರಿ ವಿಠಲ ಲೋಕಾಯುಕ್ತ ಬಲೆಗೆ ಬಿದ್ದವರು. ಶಿಕಾರಿಪುರ ಪಟ್ಟಣದ ಸರ್ಕಾರಿ ನೌಕರರ ಕ್ಯಾಂಟೀನ್ ನಲ್ಲಿ ಲಂಚದ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.
ಜಮೀನು ಖಾತೆ ಬದಲಾವಣೆ ಮಾಡಿಕೊಡಲು ಗ್ರಾಮ ಲೆಕ್ಕಾಧಿಕಾರಿ ವಿಠಲ, ಜಕ್ರಿಯಾ ಎಂಬುವವರಿಗೆ 4 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿತ್ತು. 1 ಲಕ್ಷ ರೂಪಾತಿ ಮುಂಗಡವಾಗಿ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಿಠಲನ್ನು ಬಂಧಿಸಿದ್ದಾರೆ.
