Kannada NewsNationalPolitics

*ಮಹಾರಾಷ್ಟ್ರ ಡಿಸಿಎಂ ಆಗಿ ಸುನೇತ್ರಾ ಪವಾರ್ ಪ್ರಮಾಣವಚನ ಸ್ವೀಕಾರ*

ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ದಿ.ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಈ ಮೂಲಕ ಮಹಾರಾಷ್ಟ್ರದ ಮೊದಲ ಮಹಿಳಾ ಡಿಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇತ್ತೀಚೆಗೆ ಬಾರಾಮತಿಯಲ್ಲಿ ನಡೆದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮೃತಪಟ್ಟಿದ್ದರು. ಅವರ ನಿಧನದಿಂದ ತೆರವಾಗಿದ್ದ ಉಪಮುಖ್ಯಮಂತ್ರಿ ಹುದ್ದೆಗೆ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಅವರನ್ನು ಆಯ್ಕೆ ಮಾಡಲಾಗಿದೆ.

ಎನ್ ಸಿಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುನೇತ್ರಾ ಪವಾರ್ ಅವರನ್ನು ಪಕ್ಷದ ನಾಯಕಿಯನ್ನಾಗಿ ಸರ್ವಾನುಮತದಿಂದ ಘೋಷಿಸಲಾಯಿತು. ಬಳಿಕ ಲೋಕಭವನದಲ್ಲಿ ನಡೆದ ಸರಳ ಪಮಾಣವಚನ ಸಮಾರಂಭದಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಸುನೇತ್ರಾ ಪವಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Home add -Advt

Related Articles

Back to top button