ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಉಪಚುನಾವಣೆಯಲ್ಲಿ ಗೆದ್ದ ಎಲ್ಲ ಶಾಸಕರಿಗೂ ಮಂತ್ರಿಸ್ಥಾನ ನೀಡಲು ಬಿಜೆಪಿ ಹೈಕಮಾಂಡ್ ನಿರಾಕರಿಸಿದೆ. ಗೆದ್ದ 11 ಶಾಸಕರ ಪೈಕಿ ಕೆಲವರಿಗೆ ಮಾತ್ರ ಸಚಿವ ಸ್ಥಾನಕ್ಕೆ ಒಪ್ಪಿಗೆ ನೀಡಾಲಾಗಿದ್ದು, ಉಳಿದವರಿಗೆ ನಿರಾಸೆ ಕಾದಿದೆ.
ಉಪಚುನಾವಣೆಯಲ್ಲಿ ಗೆದ್ದ 11 ಶಾಸಕರಿಗೂ ಸಚಿವ ಸ್ಥಾನ ನೀಡಾಲಾಗುವುದು ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದರು. ಆದರೀಗ ಇದಕ್ಕೆ ಬಿಜೆಪಿ ವರಿಷ್ಠರು ಸಮ್ಮತಿ ಸೂಚಿಸಿಲ್ಲ ಎನ್ನಲಾಗಿದೆ. ಗೆದ್ದ 11 ಶಾಸಕರಲ್ಲಿ 8 ಶಾಸಕರಿಗೆ ಮಾತ್ರ ಸಚಿವ ಸ್ಥಾನ ನೀಡಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಒಪ್ಪಿಗೆ ಸೂಚಿಸಿದ್ದಾರೆ.
ಆರಂಭದಲ್ಲಿ 11 ಶಾಸಕರ ಪೈಕಿ 6 ಶಾಸಕರಿಗೆ ಮಾತ್ರ ಸಚಿವ ಸ್ಥಾನ ನೀಡಲು ಅಮಿತ್ ಶಾ ಒಪ್ಪಿದ್ದರು. ಆದರೆ ವರಿಷ್ಠರ ನಿರ್ಧಾರವನ್ನು ಒಪ್ಪದ ಸಿಎಂ ಬಿ.ಎಸ್ ಯಡಿಯೂರಪ್ಪ, ಹೆಚ್ಚುವರಿ ಸ್ಥಾನ ನೀಡುವಂತೆ ಪಟ್ಟು ಹಿಡಿದಿದ್ದರು. ಅಂತಿಮವಾಗಿ 8 ಶಾಸಕರಿಗೆ ಸಚಿವ ಸ್ಥಾನ ನೀಡಲು ವರಿಷ್ಠರು ಒಪ್ಪಿದ್ದಾರೆ. ಈ ಹಿನ್ನಲೆಯಲ್ಲಿ ಯಾವ ಶಾಸಕರು ಸಚಿವ ಸ್ಥಾನದಿಂದ ವಂಚಿತರಾಗಲಿದ್ದಾರೆ ಹಾಗೂ ಯಾವ ಸಚಿವರಿಗೆ ಕೋಕ್ ನೀಡಲಿದ್ದಾರೆ ಎಂಬುದು ತಿಳಿದುಬಂದಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ