LatestNationalPolitics

*ಕೇಂದ್ರ ಬಜೆಟ್: ಆದಾಯ ತೆರಿಗೆಯಲ್ಲಿನ ಘೋಷಣೆಗಳೇನು?*

ಪ್ರಗತಿವಾಹಿನಿ ಸುದ್ದಿ: ಲೋಕಸಭೆಯಲ್ಲಿ 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಹೊಸ ಆದಾಯ ತೆರಿಗೆ ಬಗ್ಗೆ ಘೋಷಿಸಿದ್ದಾರೆ.

ಆದಾಯ ತೆರಿಗೆ ನಮೂನೆಗಳನ್ನು ಸರಳೀಕರಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಹೊಸ ಕಾನೂನು ಏಪ್ರಿಲ್ 1, 2026 ರಿಂದ ಜಾರಿಗೆ ಬರಲಿದೆ ಎಂದರು.

ವಿದೇಶಿ ಪ್ರಯಾಣದ ಮೇಲಿನ ತೆರಿಗೆಗಳನ್ನು ಕಡಿಮೆ ಮಾಡಲಾಗುತ್ತದೆ. ವಿದೇಶಿ ಪ್ರಯಾಣಕ್ಕಾಗಿ ಟಿಸಿಎಸ್ ದರವನ್ನು 5% ಕ್ಕೆ ಇಳಿಸಲಾಗಿದೆ. ಜುಲೈ 31 ರವರೆಗೆ ರಿಟರ್ನ್ಸ್ ಸಲ್ಲಿಸಬಹುದು. ಈ ಕಾನೂನು ಅಘೋಷಿತ ಆದಾಯವನ್ನು ಒಂದು ಕೋಟಿ ರೂಪಾಯಿಗಳಿಗೆ ಮಿತಿಗೊಳಿಸಲು ಸಹ ಪ್ರಸ್ತಾಪಿಸುತ್ತದೆ.

ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಐಟಿಆರ್ ರಿಟರ್ನ್ಸ್​ ಸಲ್ಲಿಸಲು ಜುಲೈ 31ರವರೆಗೂ ಅವಕಾಶ ನೀಡಲಾಗಿದೆ. ಈ ಮೊದಲು ಡಿಸೆಂಬರ್ 31 ವರೆಗೆ ಇತ್ತು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button