*ಕೇಂದ್ರದ ಬಜೆಟ್ ಪ್ರಗತಿದಾಯಕ: ಡಾ. ಪ್ರಭಾಕರ ಕೋರೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ದೇಶಕ್ಕೆ ಪ್ರಗತಿದಾಯಕವಾದ ಬಜೆಟ್ ನ್ನು ಮಂಡಿಸಿದ್ದಾರೆ. ಶಿಕ್ಷಣ, ಕೃಷಿ, ನೀರಾವರಿ, ಸಾರಿಗೆ, ಸಣ್ಣ ಹಾಗೂ ಬೃಹತ್ ಕೈಗಾರಿಕೆಗಳಿಗೆ ಹೆಚ್ಚಿನ ಒತ್ತು ಕೊಟ್ಟಿದ್ದು ಮುಂಬರುವ ದಿನಗಳಲ್ಲಿ ನವ ಕ್ರಾಂತಿಯನ್ನು ಉಂಟು ಮಾಡಲಿದೆ ಎಂದು ಕೆ.ಎಲ್.ಇ ಸಂಸ್ಥೆ ಮುಖ್ಯಸ್ಥ ಡಾ.ಪ್ರಭಾಕರ ಕೋರೆ ತಿಳಿಸಿದ್ದಾರೆ.
ಮಹಿಳಾ ಸಬಲೀಕರಣಕ್ಕೂ ಕೇಂದ್ರ ಹೆಚ್ಚಿನ ಆದ್ಯತೆ ಕಲ್ಪಿಸಿದೆ. ಪ್ರತಿ ಜಿಲ್ಲೆಯಲ್ಲಿ ವಿದ್ಯಾರ್ಥಿನಿಯರ ವಸತಿ ನಿಲಯ ಸ್ಥಾಪನೆಗೆ ಅನುದಾನವನ್ನ ನೀಡಿದೆ. ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚು ಸೌಕರ್ಯಗಳನ್ನು ಕಲ್ಪಿಸಿದೆ. ಈ ಬಜೆಟ್ ರೈತರ ಬದುಕಿಗೆ ಆಶಾಕಿರಣವಾಗಿದೆ. ಮೋದಿಜಿ ನೇತೃತ್ವದ ಸರ್ಕಾರ ಕಳೆದ ವರ್ಷಕ್ಕಿಂತಲೂ ಈ ವರ್ಷ ಹೊಸತನಕ್ಕೆ ಆದ್ಯತೆ ನೀಡಿದೆ ಎಂದಿದ್ದಾರೆ.
ಆತ್ಮನಿರ್ಭರ ಭಾರತಕ್ಕೆ ಹೊಸ ಸಂಕಲ್ಪದೊಂದಿಗೆ ವ್ಯಾಖ್ಯಾನವನ್ನು ಬರೆದಿದೆ. ಭಾರತದಲ್ಲಿ ಇದರಿಂದ ಹೊಸ ಉದ್ಯೋಗಳು ಸೃಷ್ಟಿಯಾಗಿ ಯುವಜನತೆ ಜೀವನನ್ನು ರೂಪಿಸಿಕೊಳ್ಳಲು ಅನುಕೂಲ ಮಾಡಿದೆ. ಒಟ್ಟಿನಲ್ಲಿ ಇದೊಂದು ಪ್ರಗತಿದಾಯಕ ಹಾಗೂ ಅರ್ಥಪೂರ್ಣವಾದ ಬಜೆಟ್ ಎಂಬುವುದರಲ್ಲಿ ಎರಡು ಮಾತಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.




