Kannada NewsLatestNational

*ಪೆನ್ನಾರ್ ನದಿ ನೀರು ಹಂಚಿಕೆ ವಿವಾದ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು*

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಪಿನಾಕಿನಿ ಎಂದೇ ಹೆಸರಾಗಿರುವ ಪೆನ್ನಾರ್ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕಕ್ಕೆ ಹಿನ್ನಡೆಯಾಗಿದೆ.

ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಪೆನ್ನಾರ್ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಜಲ ವಿವಾದ ಬಗೆಹರಿಸಲು ನ್ಯಾಯಮಂಡಳಿ ರಚಿಸುವಂತೆ ಕೇಂದ್ರ ಜಲಶಕ್ತಿ ಸಚಿವಾಲಯಕ್ಕೆ ಆದೇಶ ನೀಡಿದೆ.

ಪೆನ್ನಾರ್ ನದಿ ವಿವಾದಕ್ಕೆ ಸಂಬಂಧಿಸಿದಂತೆ ಜಲ ನ್ಯಾಯಮಂಡಳಿ ರಚಿಸುವಂತೆ ತಮಿಳುನಾಡು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರಿಂ ಕೋರ್ಟ್, ಇದೀಗ ತಮಿಳುನಾಡು ಅರ್ಜಿ ಪುರಸ್ಕರಿಸಿದ್ದು, ನ್ಯಾಯಮಂಡಳಿ ರಚನೆಗೆ ಸೂಚಿಸಿದೆ. ಇದರಿಂದಾಗಿ ಪೆನ್ನಾರ್ ನದಿ ನೀರನ್ನು ಬಳಸಿಕೊಂಡು ಕರ್ನಾಟಕ ಸರ್ಕಾರ ಕೈಕೊಂಡಿದ್ದ ಹಲವು ಯೋಜನೆಗಳಿಗೆ ತಾತ್ಕಾಲಿಕ ತಡೆ ಬೀಳುವಂತಾಗಿದೆ.

Home add -Advt


Related Articles

Back to top button