Karnataka NewsLatestPolitics

*ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಹಾಕಲಾಗುವುದು: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ದೇಶೀಯವರಿಗೆ ಮನೆಗಳನ್ನು ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ದೇಶೀಯವರಿಗೆ ಮನೆಗಳನ್ನು ನೀಡುವುದಿಲ್ಲ ಹಾಗೂ ಅವರನ್ನು ರಾಜ್ಯದಿಂದ ಹೊರಗೆ ಕಳಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಪದ್ಮಶ್ರೀ ವಿಜೇತ ಮಾಜಿ ರಾಜ್ಯಸಭಾ ಸದಸ್ಯೆ ಜಯಶ್ರೀ ಯವರ ಭೂಮಿಯ ಸರ್ವೇ ಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಯು ಕರ್ತವ್ಯಚ್ಯುತಿ ಮಾಡಿದ್ದರೆ, ಅವರ ಮೇಲೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ತಪ್ಪು ಎಸಗಿದ ಅಧಿಕಾರಿಯ ಮೇಲೆ ನಿಸ್ಸಂದೇಹವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.

ನಮ್ಮ ಸರ್ಕಾರ ಹಾದಿಯನ್ನು ತಪ್ಪಿಲ್ಲ ಹಾಗೂ ನಾನು ಅಸಹಾಯಕ ಮುಖ್ಯಮಂತ್ರಿಯೂ ನಾನಲ್ಲ. 2.5 ವರ್ಷದಲ್ಲಿ ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಿದ್ದೇವೆ ಎಂದರು .

Home add -Advt

22 ಜನವರಿ 2026 ರಂದು ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಾಡಲಾದ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯ ಪ್ರಸ್ತಾವನ್ನು ಇಂದು ಅಂಗೀಕರಿಸಲಾಯಿತು.

Related Articles

Back to top button