*ಲಾಂಡ್ ಲಾರ್ಡ್ ಸಿನಿಮಾಗೆ ತೆರಿಗೆ ವಿನಾಯಿತಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಸಿನಿಮಾಗೆ ತೆರಿಗೆ ವಿನಾಯಿತಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕನ್ನಡದ ಬಹುನಿರೀಕ್ಷಿತ ಚಿತ್ರ ಲ್ಯಾಂಡ್ ಲಾರ್ಡ್ ಸಿನಿಮಾಗೆ ತೆರಿಗೆ ವಿನಾಯಿತಿ ಮಾಡುವಂತೆ ನಟ ದುನಿಯಾ ವಿಜಯ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದರು.
ದಿನಿಯಾ ವಿಜಯ್ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಇದೀಗ ಲಾಂಡ್ ಲಾರ್ಡ್ ಚಿತ್ರಕ್ಕೆ ತೆರಿಗೆ ವಿನಾಯಿತಿ ಮಾಡುವಂತೆ ಸೂಚಿಸಿದ್ದಾರೆ. ಈ ಚಿತ್ರ ಭೂಸುಧಾರಣೆ, ರೈತರ ಹೋರಾಟ, ಗ್ರಾಮೀಣ ಭಾಗದ ಪ್ರಮುಖ ಸಾಮಾಜಿಕ ಸಮಸ್ಯೆಗಳನ್ನು ಆಧರಿಸಿದ ಕಥಾಹಂದರವುಳ್ಳ ಸಿನಿಮಾ ಆಗಿದೆ. ಇಂತಹ ಮಹತ್ವದ ವಿಷಯಗಳನ್ನು ಸಾಮಾನ್ಯ ಜನರಿಗೂ ತಲುಪಿಸುವ ಉದ್ದೇಶದಿಂದ ತೆರಿಗೆ ವಿನಾಯಿತಿಗೆ ಸೂಚಿಸಲಾಗಿದೆ.
*ಸಾಮಾಜಿಕ ಅಸಮಾನತೆ ಮತ್ತು ಜಾತಿ ಶೋಷಣೆ ವಿಷಯಾಧಾರಿತ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯ್ತಿ ನೀಡುವಂತೆ ಮಾನ್ಯ ಮುಖ್ಯಮಂತ್ರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

