Kannada NewsKarnataka NewsPolitics

*ಸರ್ಕಾರದ ವಿರುದ್ಧ ಸದನಲ್ಲಿ ಅಹೋರಾತ್ರಿ ಧರಣಿ ನಡೆಸಿದ ಬಿಜೆಪಿ-ಜೆಡಿಎಸ್ *

ಪ್ರಗತಿವಾಹಿನಿ ಸುದ್ದಿ: ಅಬಕಾರಿ ಇಲಾಖೆಯಲ್ಲಿ ಸಾವಿರಾರು ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಅಬಕಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸದನದಲ್ಲಿಯೇ ಅಹೋರಾತ್ರಿ ಧರಣಿ ನಡೆಸಿದರು.

ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಶಾಸಕರು ಜಾಗಟೆ ಬಾರಿಸಿ, ಹಾಡು ಹಾಡಿ ವಿಭಿನ್ನವಾಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆ ಆವರಣದಲ್ಲೇ ರಾತ್ರಿ ಊಟ ಮಾಡಿ, ವಿಶ್ರಮಿಸುವ ಮೂಲಕ ಸರ್ಕಾರದ ವಿರುದ್ಧ ನಾಯಕರು ಕಿಡಿಕಾರಿದ ಪ್ರಸಂಗ ನಡೆದಿದೆ.

ಅಬಕಾರಿ ಸಚಿವರ ಮೇಲೆ ನೇರ ಆರೋಪಗಳು ಬಂದಿದ್ದರೂ ಸಿಎಂ ಸಿದ್ದರಾಮಯ್ಯ ಅವರು ಅವರ ಬೆನ್ನಿಗೆ ನಿಂತಿರುವುದು ಅನುಮಾನಕ್ಕೆ ಕಾರಣವಾಗಿದೆ. ಅಬಕಾರಿ ಇಲಾಖೆಯ ಐದು ರಿಂದ ಆರು ಸಾವಿರ ಕೋಟಿ ರೂಪಾಯಿ ಭ್ರಷ್ಟಾಚಾರ ಹಗರಣದಲ್ಲಿ ಸಚಿವರಷ್ಟೇ ಅಲ್ಲದೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೂ ಪಾಲು ಹೋಗಿರುವುದರಲ್ಲಿ ಯಾವುದೇ ಸಂದೇಹವಿಲ್ಲ ಆಕ್ರೋಶ ಹೊ ಹಾಕಲಾಯಿತು.

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಭಂಡತನದ ರಾಜಕಾರಣ ಮಾಡುತ್ತಿದೆ. ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಬಕಾರಿ ಸಚಿವರನ್ನು ತಕ್ಷಣವೇ ಸಚಿವ ಸ್ಥಾನದಿಂದ ವಜಾಗೊಳಿಸಿ ರಾಜೀನಾಮೆ ಪಡೆಯಬೇಕು ಒತ್ತಾಯಿಸಿದರು.

Home add -Advt

ಅಬಕಾರಿ ಇಲಾಖೆಯ ಭ್ರಷ್ಟಾಚಾರ ಪ್ರಕರಣದ ವಿರುದ್ಧ ಸರ್ಕಾರದ ಗಮನ ಸೆಳೆಯಲು ಹಾಗೂ ಭ್ರಷ್ಟ ಸಚಿವರ ರಾಜೀನಾಮೆ ಪಡೆಯುವಂತೆ ಆಗ್ರಹಿಸಿ, ಬಿಜೆಪಿ-ಜೆಡಿಎಸ್ ಪಕ್ಷಗಳು ಇಂದು ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ನಡೆಸಲಿವೆ ಎಂದು ವಿಜಯೇಂದ್ರ ತಿಳಿಸಿದರು.

Related Articles

Back to top button