*ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ: 12 ಜನ ಆರೋಪಿಗಳಿಗೆ 5 ವರ್ಷ ಜೈಲು ಶಿಕ್ಷೆ ಪ್ರಕಟ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2023 ರಲ್ಲಿ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, 12 ಜನ ಆರೋಪಿಗಳಿಗೆ ತಲಾ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಬೆಳಗಾವಿ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ.
ಬಸಪ್ಪ ನಾಯಿಕ, ರಾಜು ನಾಯಿಕ, ಕೆಂಪಣ್ಣ ನಾಯಿಕ, ಪಾರ್ವತಿ ನಾಯಿಕ, ಯಲ್ಲವ್ವ ನಾಯಿಕ, ಲಕ್ಕಪ್ಪ ನಾಯಿಕ, ಗಂಗವ್ವ ನಾಯಿಕ, ಸಂಗೀತಾ ಹೆಗ್ಗನಾಯಿಕ, ಸಂತೋಷ ನಾಯಿಕ, ಶೋಭಾ ನಾಯಿಕ, ಲಕ್ಕವ್ವ ನಾಯಿಕ ಹಾಗೂ ಶಿವಪ್ಪ ವನ್ನೂರಿ ಶಿಕ್ಷೆಗೊಳಗಾದ ಅಪರಾಧಿಗಳು.
ಸರ್ಕಾರಿ ವಿಶೇಷ ಅಭಿಯೋಜಕ ಎಲ್.ಎಸ್. ಸುಳ್ಳದ, ಆರೋಪಿ ಪರ ವಕೀಲರಾದ ರವಿರಾಜ್ ಪಾಟೀಲ್, ಎಂ.ಎಂ.ಶೇಕ್ ಇಬ್ಬರೂ ಈ ವೇಳೆ ಗೈರಾಗಿದ್ದರು.
ಸೆಕ್ಷನ್ 109, 114, 117, 143, 147, 148, 307, 323, 324, 341, 342, 326, 353, 354, 354(ಬಿ), 355, 392, 427, 452, 504, 506, 142, 34, 37, 2(ಎ) ಆಸ್ತಿ ನಾಶ ಕಾಯ್ದೆ ಅಡಿ ಶಿಕ್ಷೆ ಪ್ರಕಟವಾಗಿದೆ.
ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ನ್ಯಾಯಾಲಯದ ಹಾಲ್ನಲ್ಲಿ ಆರೋಪಿಗಳು ಮತ್ತು ಅವರ ಕುಟುಂಬಸ್ಥರು ಭಾವುಕರಾದರು.


