Belagavi NewsBelgaum NewsKarnataka NewsLatestPolitics

*ವಿವಿಧ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿದ ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕರಿಕಟ್ಟಿ ಕ್ರಾಸ್‌ನಿಂದ ಭೀಮಗಡ ಗ್ರಾಮದವರೆಗಿನ ನೂತನ ರಸ್ತೆ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಬುಧವಾರ ಚಾಲನೆ ನೀಡಿದರು.


ಸುಮಾರು 1.80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ರಸ್ತೆಯಿಂದ ರೈತರಿಗೆ ತಮ್ಮ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲು ಹಾಗೂ ಸಾರ್ವಜನಿಕರ ದೈನಂದಿನ ಪ್ರಯಾಣಕ್ಕೆ ಅನುಕೂಲವಾಗಲಿದೆ. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ನಂತರ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಚಂದೂರ ಗ್ರಾಮದಲ್ಲಿ ಸುಮಾರು 35 ಲಕ್ಷ ರೂ. ವೆಚ್ಚದಲ್ಲಿ ಪೇವರ್ಸ್ ರಸ್ತೆ ನಿರ್ಮಾಣದ ಕಾಮಗಾರಿಗೆ ಚನ್ನರಾಜ ಹಟ್ಟಿಹೊಳಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Home add -Advt

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ವಡೆಬೈಲ್ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಜೀರ್ಣೋದ್ಧಾರದ ಸಮಾರಂಭದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ‘ಚೌಕಟ್ಟು ಪೂಜೆ’ ಹಾಗೂ ಸತ್ಕಾರ ಸಮಾರಂಭ’ದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿ, ಮಾತನಾಡಿದರು.

Related Articles

Back to top button