Kannada NewsKarnataka NewsLatest

*ಲಾರಿ ಹಾಗೂ ಕ್ರೂಸರ್ ನಡುವೆ ಅಪಘಾತ: ಮೂವರ ಸಾವು*

ಪ್ರಗತಿವಾಹಿನಿ ಸುದ್ದಿ : ಲಾರಿ ಹಾಗೂ ಕ್ರೂಸರ್ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗದಗದ ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗಜೇಂದ್ರಗಡದ ಶಿವಾಜಿ ನಗರ ನಿವಾಸಿಗಳಾದ ಕೂಲಿ ಕಾರ್ಮಿಕರು ಕ್ರೂಸರ್ ವಾಹನದಲ್ಲಿ ಕೆಲಸಕ್ಕಾಗಿ ರೋಣ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಸ್ಥಳಕ್ಕೆ ರೋಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನೂ ಹಲವರ ಸ್ಥಿತಿ ಗಂಭೀರವಾಗಿದೆ. ಮೃತರ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದ್ದು, ಮೃತದೇಹಗಳನ್ನು ಪರೀಕ್ಷೆಗಾಗಿ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

Home add -Advt

Related Articles

Back to top button