
ಪ್ರಗತಿವಾಹಿನಿ ಸುದ್ದಿ: ಮಸೀದಿ ಬಳಿ ಭೀಕರ ಬಾಂಬ್ ಸ್ಫೋಟ ಸಂಭವಿಸಿದ್ದು, 24 ಜನರು ಸಾವನ್ನಪ್ಪಿರುವ ಘಟನೆ ಇಸ್ಲಾಮಾಬಾದ್ ನಲ್ಲಿ ನಡೆದಿದೆ.
ಪಾಕಿಸ್ತಾನದ ಇಸ್ಲಾಮಾಬಾದ್ ಮಸೀದಿ ಬಳಿ ಬಾಂಬ್ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ 24 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಆಗ್ನೇಯ ಇಸ್ಲಾಮಾಬಾದ್ನ ತರ್ಲೈ ಕಲಾನ್ ಪ್ರದೇಶದ ಖದೀಜಾ ತಲ್ ಕುಬ್ರಾ ಮಸೀದಿಯಲ್ಲಿ ಶುಕ್ರವಾರ ಪ್ರಾರ್ಥನೆಯ ಸಮಯದಲ್ಲಿ ಈ ಸ್ಫೋಟ ಸಂಭವಿಸಿದೆ. ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆದಿದೆ.


