Kannada NewsKarnataka NewsLatest
*ಬಸ್ ಓಡಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ: ಆದರೂ ಸಮಯ ಪ್ರಜ್ಞೆ ಮೆರೆದ ವ್ಯಕ್ತಿ*

ಪ್ರಗತಿವಾಹಿನಿ ಸುದ್ದಿ: ಬಸ್ ಓಡಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತವಾಗಿದ್ದು, ಆದರೂ ಸಮಯ ಪ್ರಜ್ಞೆ ಮೆರೆದು ಪ್ರಯಾಣಿಕರ ಜೀವವನ್ನು ಉಳಿಸಿರುವ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮುಡಬಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಖಾಸಗಿ ಬಸ್ ಚಲಾಯಿಸುತ್ತಿದ್ದಾಗಲೇ ಚಾಲಕ ರಮೇಶ್ ಅವರಿಗೆ ಹೃದಯಾಘಾತವಾಗಿದೆ. ಆದರೂ ತಾಳ್ಮೆಯಿಂದ ಬಸ್ ನ್ನು ರಸ್ತೆ ಬದಿ ನಿಲ್ಲಿಸಿದ್ದಾರೆ. ಬಸ್ ನಲ್ಲಿದ್ದ 40 ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ.
ಚಾಲಕನಿಗೆ ಹೃದಯಾಘಾತವಾಗಿರುವುದನ್ನು ಅರಿತ ಕುರುವಳ್ಲಿ ಸಮಾಜಸೇವಕ ನಾಗರಾಜ್ ತುರ್ತು ನೆರವು ನೀಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲದೇ ಆಸ್ಪತ್ರೆಯ ಖರ್ಚು ವೆಚ್ಚವನ್ನು ಅವರೇ ಭರಿಸುವುದಾಗಿ ತಿಳಿಸಿದ್ದಾರೆ.



