Kannada NewsLatestNational
*ಭೀಕರ ಅಪಘಾತ: ಶೌಚಾಲಯಕ್ಕೆಂದು ಬಸ್ ನಿಂದ ಇಳಿದಿದ್ದವರ ಮೇಲೆ ಹರಿದ ವಾಹನ: 6 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಶೌಚಾಲಯಕ್ಕೆಂದು ಬಸ್ ನಿಂದ ಇಳಿದಿದ್ದವರ ಮೆಲೆ ಕಂಟೇನರ್ ವಾಹನ ಹರಿದ ಪರಿಣಾಮ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ,’
ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಈ ದುರಂತ ಸಂಭವಿಸಿದೆ. ಬಸ್ ಚಾಲಕ ಹಸಿರು ವಲಯದಲ್ಲಿ ಬಸ್ ನಿಲ್ಲಿಸುವ ಬದಲು ರಸ್ತೆಯಲ್ಲೇ ನಿಲ್ಲಿಸಿದ್ದ. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಕಂಟೇನರ್ ಬಸ್‌ಗೆ ಡಿಕ್ಕಿ ಹೊಡೆದು ಕೆಳಗೆ ನಿಂತಿದ್ದ ಪ್ರಯಾಣಿಕರ ಮೇಲೆ ಹರಿದಿದೆ. ಪರಿಣಾಮ ೬ ಜನರು ಸಾವನ್ನಪ್ಪಿದ್ದಾರೆ.
ಖಾಸಗಿ ಬಸ್ ದೆಹಲಿಯಿಂದ ಕಾನ್ಪುರಕ್ಕೆ ತೆರಳುತ್ತಿತ್ತು. ಇಂದು ಬೆಳಗಿನ ಜಾವ ಸುಮಾರು 2:45 ರ ಸುಮಾರಿಗೆ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಈ ದುರಂತ ಸಂಭವಿಸಿದೆ. ಘಟನ ಅಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.



