Belagavi NewsBelgaum NewsCrimeKannada NewsKarnataka NewsNational
*ಬೆಳಗಾವಿ-ಬಾಗಲಕೋಟೆ ಹೆದ್ದಾರಿಯಲ್ಲಿ ಭೀಕರ ಅಪಘಾತ: ಬೈಕ್ ಸವಾರ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಟ್ರಕ್ ಚಾಲಕನ ಅಜಾಗುರಕತೆಗೆ ಬೈಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಹಲಕಿ ಗ್ರಾಮದ ಸಮೀಪದ ಬೆಳಗಾವಿ- ಬಾಗಲಕೋಟೆ ರಸ್ತೆಯಲ್ಲಿ ನಡೆದಿದೆ.
ಹಲಕಿ ಗ್ರಾಮದ ಬಳಿಯ ಬೆಳಗಾವಿ-ಬಾಗಲಕೋಟೆ ರಸ್ತೆಯಲ್ಲಿ ಬೈಕ್ -ಟ್ರಕ್ ಡಿಕ್ಕಿ ಹೋಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ದಯಾನಂದ ಮಹಾಂತಪ್ಪ ಕಂಠಿ (54) ಮೃತ ವ್ಯಕ್ತಿ.
ಈ ಬಗ್ಗೆ ಮುರಗೋಡ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಮುರಗೋಡ ಠಾಣೆಯ ಪೊಲೀಸರು ಭೇಟಿ ನೀಡಿ ತನಿಖೆ ಕೈಕೊಂಡಿದ್ದಾರೆ.



