Kannada NewsKarnataka NewsLatest

*ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಸರ್ಕಾರ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್ ನೀಡಿದೆ.

ಸೋಮವಾರದಿಂದ ಜಾರಿಗೆ ಬರಬೇಕಿದ್ದ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ಕೇಂದ್ರದಿಂದ ತಡೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರದಿಂದ ನಮ್ಮ ಮೆಟ್ರೋ ಪ್ರಯಾಣದರ ಏರಿಕೆ ಇಲ್ಲ ಎಂದು ತಿಳಿದುಬಂದಿದೆ. ಈ ಮೂಲಕ ಬೆಂಗಳೂರಿಗರು ಕೊಂಚ ನಿಟ್ಟುಸಿರು ಬಿಡುವಂತಾಗಿದೆ

ನಮ್ಮ ಮೆಟ್ರೋದ ಟಿಕೆಟ್ ದರ ಏರಿಕೆ ಮಾಡುತ್ತಿರುವುದಕ್ಕೆ ಬಿಎಂಆರ್ ಸಿ ಎಲ್ ವಿರುದ್ಧ ಜನಾಕ್ರೋಶ ವ್ಯಕ್ತವಾಗಿತ್ತು. ರಾಜಕೀಯ ಜಟಾಪಟಿಗೂ ಕಾರಣವಾಗಿತ್ತು. ಈ ಮಧ್ಯೆ ಮೆಟ್ರೋ ಪ್ರಯಾಣ ದರ ಏರಿಕೆಗೆ ಸದ್ಯ ತಾತ್ಕಾಲಿಕ ಬ್ರೇಕ್​ ಬಿದ್ದಿದೆ.

Home add -Advt

ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಜತೆ ದೂರವಾಣಿ ಸಂಭಾಷಣೆ ಮಾಡಿರುವೆ. ಫೆ.9ರಿಂದ ಮೆಟ್ರೋ ಟಿಕೆಟ್ ದರ ಹೆಚ್ಚಿಸದಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.

ದೇಶದಲ್ಲೇ ನಮ್ಮ ಮೆಟ್ರೋ ಅತ್ಯಂತ ದುಬಾರಿ ಮೆಟ್ರೋ ಸೇವೆಯಾಗಿದೆ. ಮೆಟ್ರೋ ಪ್ರಯಾಣ ದರ ವ್ಯತ್ಯಾಸದ ಬಗ್ಗೆ ಕೇಂದ್ರದ ಗಮನ ಸೆಳೆದಿದ್ದೇನೆ. ಮೆಟ್ರೋ ಟಿಕೆಟ್ ದರ ಏರಿಕೆಯಿಂದ ಲಕ್ಷಾಂತರ ಜನರಿಗೆ ಹೊರೆಯಾಗಲಿದೆ. ಸಾರ್ವಜನಿಕ ಸಾರಿಗೆ ತಲುಪಲು ಕಷ್ಟವಾಗುತ್ತದೆ. ಹೀಗಾಗಿ ಪ್ರಸ್ತಾವಿತ ದರ ಏರಿಕೆ ತಾತ್ಕಾಲಿಕವಾಗಿ ತಡೆ ಹಿಡಿಯಲು ಸೂಚಿಸಿದ್ದು, ಸೋಮವಾರದಿಂದ ಮೆಟ್ರೋ ಟೆಕೆಟ್ ದರ ಹೆಚ್ಚಳವಾಗುವುದಿಲ್ಲ ಎಂದು ತಿಳಿಸಿದ್ದಾರೆ.

Related Articles

Back to top button