
ಪ್ರಗತಿವಾಹಿನಿ ಸುದ್ದಿ: ತಾಯಿ ಮಗಳು ಇಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ತಾಯಿ ಹಾಗೂ 19 ವರ್ಷದ ಮಗಳು ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಕುಂತಲಾದೇವಿ (46) ಹಾಗೂ ಪ್ರಿಯಾಂಕಾ (19) ಮೃತ ದುರ್ದೈವಿಗಳು.
ಪ್ರಿಯಾಂಕಾಳ ಮದುವೆಗೆ ಕುಟುಂಬದವರು ಸಿದ್ಧತೆ ನಡೆಸಿದ್ದರು. ಆದರೆ ಈಗ ಏಕಾಏಕಿ ತಾಯಿ-ಮಗಳು ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದು, ಕುಟುಂಬದಲ್ಲಿ ದು:ಖ ಮಡುಗಟ್ಟಿದೆ.



