Kannada NewsLatestNational

*ಅಯೋಧ್ಯೆ ರಾಮ ಮಂದಿರದ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಆರೋಪಿ ಜೈಲಿನಲ್ಲಿಯೇ ಕೊಲೆ*

ಪ್ರಗತಿವಾಹಿನಿ ಸುದ್ದಿ: ಅಯೋಧ್ಯೆ ರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಬಂಧನಕ್ಕೀಡಾಗಿದ್ದ ಆರೋಪಿ ಜೈಲಿನಲ್ಲಿಯೇ ಕೊಲೆಯಾಗಿರುವ ಘಟನೆ ನಡೆದಿದೆ.

ಫರಿದಾಬಾದ್ ಜೈಲಿನಲ್ಲಿ ಆರೋಪಿ ಅಬ್ದುಲ್ ರೆಹಮಾನ್ ಸಹ ಕೈದಿಯಿಂದ ಹತ್ಯೆಯಾಗಿದ್ದಾನೆ. ಜೈಲಿನಲ್ಲಿದ್ದ ಕಾಶ್ಮೀರಿ ಯುವಕ ಅರುಣ್ ಛೌಡರಿ ಅಬ್ದುಲ್ ರೆಹಮಾನ್ ನನ್ನು ಹರಿತವಾದ ವಸ್ತುವಿನಿಂದ ಇರಿದು ಕೊಲೆ ಮಾಡಿದ್ದಾನೆ.

ಅಯೋಧ್ಯೆ ರಾಮ ಮಂದಿರದ ಮೇಲೆ ದಾಳಿಗೆ ಸಂಚು ರೂಪಿಸಿದ ಆರೋಪದಲ್ಲಿ ಅಬ್ದುಲ್ ರೆಹಮಾನ್ ಬಂಧನಕ್ಕೀಡಾಗಿ ಫರಿದಾಬಾದ್ ಜೈಲು ಸೇರಿದ್ದ. ಭಾನುವಾರ ಸಹ ಕೈದಿ ಅರುಣ್ ಹಾಗೂ ಅಬ್ದುಲ್ ರೆಹಮಾನ್ ನಡುವೆ ಜಗಳವಾಗಿತ್ತು. ಪರಸ್ಪರ ಮಾರಾಮಾರಿಯೂ ನಡೆದಿತ್ತು. ಗಂಭೀರವಾಗಿ ಹಲ್ಲೆಗೊಳಗಾಗಿದ ಅಬ್ದುಲ್ ರೆಹಮಾನ್ ನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ತಪಾಸಣೆ ನಡೆಸಿದ ವೈದ್ಯರು ಆತ ಸಾವನ್ನಪ್ಪಿದ್ದಾಗಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button