17 ಶಾಸಕರಿಗೂ ಸಚಿವ ಸ್ಥಾನ ನೀಡಬೇಕು ಎಂದ ಹೆಚ್ ವಿಶ್ವನಾಥ್

ಪ್ರಗತಿವಾಹಿನಿ ಸುದ್ದಿ; ರಾಯಚೂರು: ಮೈತ್ರಿ ಸರ್ಕಾರ ಪತನಮಾಡಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ 17 ಜನರಿಗೂ ಸಚಿವ ಸ್ಥಾನ ನೀಡಬೇಕು ಎಂದು ಮಾಜಿ ಶಾಸಕ ಹೆಚ್.ವಿಶ್ವನಾಥ್ ಒತ್ತಾಯಿಸಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಂಪುಟ ವಿಸ್ತರಣೆಯಾದರೆ 17 ಜನರಿಗೂ ಸಚಿವ ಸ್ಥಾನ ನೀಡುವ ಸಾಧ್ಯತೆಯಿದೆ. ಮೈತ್ರಿ ಸರ್ಕಾರವನ್ನು ಅಧಿಕಾರದಿಂದ ಇಳಿಸಿ ಜನಪರ ಸರ್ಕಾರ ಅಧಿಕಾರಕ್ಕೆ ತರುವಲ್ಲಿ ನಾವು 17 ನಾಯಕರೂ ಕಾರಣವಾಗಿದ್ದೇವೆ. ಅಲ್ಲದೆ ಉಪ ಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ನೀಡಬಾರದೆಂದು ಯಾವುದೇ ಕೋರ್ಟ್ ಹೇಳಿಲ್ಲ. ಒಂದು ವೇಳೆ ಸಚಿವ ಸ್ಥಾನ ನೀಡದಿದ್ದರೆ ಮುಂದೆ ನೋಡೋಣ ಎಂದು ಪರೋಕ್ಷವಾಗಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ ಮಂಗಳೂರು ಗಲಭೆ ಕುರಿತು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಿಡಿ ಬಿಡುಗಡೆ ಮಾಡಿರುವ ಕುರಿತು ಮಾತಮಾಡಿದ ವಿಶ್ವನಾಥ್, ಅಧಿಕಾರ ಕಳೆದುಕೊಂಡ ನಂತರ ಅವರು ಮಾನಸಿಕ ನೆಮ್ಮದಿ ಕಳೆದುಕೊಂಡಿದ್ದಾರೆ. ತಾವು ಒಬ್ಬ ರಾಜ್ಯದ ನಾಯಕ ಎನ್ನುವುದನ್ನು ತೋರಿಸಿಕೊಳ್ಳಲು ಹೀಗೆ ಹೇಳುತ್ತಿದ್ದಾರೆ. ಕುಮಾರಸ್ವಾಮಿ ನಕಲಿ ಸಿಡಿ ಬಿಡುಗಡೆ ಮಾಡಿದ್ದಾರೆ ಎಂದು ಹೇಳಿದರು.

Home add -Advt

Related Articles

Back to top button