Belagavi NewsBelgaum NewsKannada NewsKarnataka NewsLatestPolitics
*ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಾಳೆ ಬೆಳಗಾವಿಗೆ ಆಗಮನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಿಜೆಪಿ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಬುಧವಾರ ಸಾಯಂಕಾಲ 5.15ಕ್ಕೆ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬೆಳಗಾವಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ನಾಳೆ ಸಾಯಂಕಾಲ 5.30ಕ್ಕೆ ಬಸವೇಶ್ವರ ಮಂಗಳ ಕಾರ್ಯಾಲಯ(ದಾನಮ್ಮದೇವಿ ಮಂದಿರ) ಮಹಾತ್ಮಪುಲೇ ರೋಡ್, ಶಹಾಪುರ ದಲ್ಲಿ ಜರುಗುವ ವಿಕಸಿತಭಾರತ ಕೇಂದ್ರ ಜನಪರ ಬಜೆಟ್ ಕುರಿತು ಮಹಿಳಾ ಸಂವಾದ ಹಾಗೂ ಪದ್ಮಶ್ರೀ ಪುರಸ್ಕೃತ ಡಾ. ಪ್ರಭಾಕರ್ ಕೋರೆ ಅವರಿಗೆ ಅಭಿನಂದನೆ ಸಮಾರಂಭದಲ್ಲಿ ಭಾಗವಹಿಸುವರು.
ಗುರುವಾರ ಬೆಳಗ್ಗೆ 10 ಗಂಟೆಗೆ ನಗರದ ಸರ್ಕೀಟ್ ಹೌಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



