Kannada NewsKarnataka NewsLatest

*ಮ್ಯಾಟ್ರಿಮೋನಿ ಮೂಲಕ ಪರಿಚಯ: ಇಬ್ಬರನ್ನು ಮದುವೆಯಾಗಿ ಮೋಸ: 9 ಯುವತಿಯರಿಗೆ ವಂಚಿಸಿದ ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮ್ಯಾಟ್ರಿಮೋನಿ ವೆಬ್ ಸೈಟ್ ಮೂಲಕ ಪರಿಚಯ ಮಾಡಿಕೊಂಡು 9 ಯುವತಿಯರಿಗೆ ವಂಚಿಸಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಯುವತಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಆಸಾಮಿ. ಸಾಲದ್ದಕ್ಕೆ ಆತನ ನಕಲಿ ಮಾವನಾಗಿ ಗುರುತಿಸಿಕೊಂಡು ನೆರವಾಗಿದ್ದ ಮತ್ತೊಬ್ಬ ವ್ಯಕ್ತಿ. ಇಬ್ಬರನ್ನೂ ಪೊಲೀಸರು ಬಮ್ಧಿಸಿದ್ದಾರೆ.

Home add -Advt

ಮ್ಯಾಟ್ರಿಮೋನಿಯಲ್ಲಿ ವರ ಹುಡುಕುತ್ತಿದ್ದ ಯುವತಿಯರೇ ಇವರ ಟಾರ್ಗೆಟ್. ಬಂಧಿತನನ್ನು ಸುಶಾಂತ್ ಪೂಜಾರಿ ಎಂದು ಗುರುತಿಸಲಾಗಿದೆ. ಈತನ ವಂಚನೆಗೆ ಸಾಥ್ ನೀಡಿದ್ದ ಮುಲ್ಕಿ ನಿವಾಸಿ ಭಾಸ್ಕರ್‌ನನ್ನೂ ಬಂಧಿಸಲಾಗಿದೆ.

ಸುಶಾಂತ್ ತನ್ನ ಅಳಿಯ ಎಂದು ಹೇಳಿ ಸಂತ್ರಸ್ತೆಯ ಕುಟುಂಬದವರಿಗೆ ನಂಬಿಕೆ ಮೂಡಿಸಲು ಭಾಸ್ಕರ್ ಧಾರ್ಮಿಕ ವಿಧಿವಿಧಾನಗಳಲ್ಲೂ ಭಾಗವಹಿಸಿದ್ದಾನೆ.

ಮ್ಯಾಟ್ರಿಮೋನಿಯಲ್ಲಿ ಪರ್ಚಯ ಮಾಡಿಕೊಂಡು ಸುಶಾಂತ್ ಇಬ್ಬರು ಯುವತಿಯರೊಂದಿಗೆ ಮದುವೆಯಾಗಿ ನಂತರ ಮೋಸ ಮಾಡಿದ್ದಾನೆ. ಇದೇ ರೀತಿ ಮದುವೆಯ ಹೆಸರಿನಲ್ಲಿ 9 ಯುವತಿಯರನ್ನು ವಂಚಿಸಿದ್ದಾನೆ.

ಮುಂಬೈನಲ್ಲಿ ಒಬ್ಬ ಯುವತಿಯನ್ನು ಮದುವೆಯಾಗಿದ್ದು, ಆಕೆಯಿಂದ ಸುಮಾರು 6.6 ಲಕ್ಷ ರೂಪಾಯಿ ಪಡೆದು ಬಳಿಕ ಪರಾರಿಯಾಗಿದ್ದ. ಉಡುಪಿ ಭಾಗದ ಇಬ್ಬರು ಯುವತಿಯರಿಗೆ ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ್ದಾನೆ. ಇದೇ ರೀತಿಯಾಗಿ ಬೆಂಗಳೂರಿನಲ್ಲಿ ಇಬ್ಬರು ಯುವತಿಯರು, ಕಾರ್ಕಳದ ಒಬ್ಬ ಯುವತಿ ಹಾಗೂ ಮಂಗಳೂರಿನ ಮತ್ತೊಬ್ಬ ಯುವತಿಯನ್ನೂ ಮೋಸಗೊಳಿಸಿದ್ದ ಪ್ರಕರಣಗಳು ಬೆಳಕಿಗೆ ಬಂದಿವೆ.

ಈ ಕುರಿತು ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯೊಬ್ಬಳು ದೂರು ನೀಡಿದ್ದಳು. ದೂರು ಆಧಾರಿಸಿ ತನಿಖೆ ಆರಂಭಿಸಿದ ಪೊಲೀಸರು ಆರೋಪಿಯ ಹಿನ್ನಲೆ ಕೆದಕಿದಾಗ ಆತನ ವಂಚನೆಗಳ ಸರಣಿ ಬಯಲಾಗಿತ್ತು. ಸದ್ಯ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.


Related Articles

Back to top button