*ಏನುಬೇಕು ಎಲ್ಲವನ್ನೂ ಹೇಳಿದ್ದೇನೆ: ರಾಹುಲ್ ಗಾಂಧಿ ಭೇಟಿ ಬಳಿಕ ಡಿಸಿಎಂ.ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಸ್ತಾಂತರದ ಚರ್ಚೆ ಹಾಗೂ ಶಾಸಕರ ಫಾರಿನ್ ಟ್ರಿಪ್ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ದೆಹಲಿಯಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ನವದೆಹಲಿಯ 10 ಜನಪಥ ರಸ್ತೆಯಲ್ಲಿರುವ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ವರಿಷ್ಠರನ್ನು ಭೇಟಿಯಾಗಿ ಮಾತನಡಿದ್ದೇನೆ. ಅಸ್ಸಾಂ ಚುನಾವಣೆ ಬಗ್ಗೆ ಚರ್ಚಿಸಿದ್ದೇವೆ ಎಂದರು.
ರಾಜಕೀಯ ಮಾಡಲೆಂದೇ ದೆಹಲಿಗೆ ಬಂದಿದ್ದೇವೆ ಹೊರತು ಇಲ್ಲಿಬಂದು ಗಾಳಿಸೇವನೆ ಮಾಡಿ ಹೋಗಲು ಬಂದಿಲ್ಲ. ನಾನು ಯಾರನ್ನು ಭೇಟಿಯಾದೆ? ಏನೆಲ್ಲ ಚರ್ಚೆ ಮಾಡಿದೆ ಎಂಬುದನ್ನು ಬಹಿರಂಗವಾಗಿ ಹೇಳುವ ಅವಶ್ಯಕತೆ ಇಲ್ಲ. ನಮ್ಮ ಪಕ್ಷದ ವಿಚಾರ ಬೀದಿಯಲ್ಲಿ ನಿಂತು ಮಾತನಾಡುವ ವಿಷಯವಲ್ಲ. ನಾನು ಒಳಗೆ ಏನೇನು ಮಾತನಾಡಿದೆ ಎಂಬುದನ್ನು ಬಹಿರಂಗಪಡಿಸಲು ಆಗಲ್ಲ. ಏನೇನು ಬೇಕೋ ಎಲ್ಲವನ್ನೂ ಹೇಳಿದ್ದೇನೆ. ಎಲದಕ್ಕೂ ಕಾಲವೇ ಉತ್ತರ ಕೊಡುತ್ತದೆ ಎಂದಿದ್ದಾರೆ.




