Kannada NewsLatestNational

*ವಿವಾದಿತ ಆಳಂದ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಸುಪ್ರೀಂ ಕೋರ್ಟ್ ಸಮ್ಮತಿ*

ಪ್ರಗತಿವಾಹಿನಿ ಸುದ್ದಿ: ಕಲಬುರ್ಗಿ ಜಿಲ್ಲೆಯ ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ದರ್ಗಾ ಸಮಿತಿಯ ಅರ್ಜಿಯನ್ನು ತಿರಸ್ಕರಿಸುವ ಮೂಲಕ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಈ ಮಹತ್ವದ ತೀರ್ಪಿನಿಂದ ಮಹಾಶಿವರಾತ್ರಿ ಪೂಜೆಗೆ ಇದ್ದ ಕಾನೂನು ಅಡೆತಡೆಗಳು ನಿವಾರಣೆಯಾಗಿವೆ.

ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆ ನಡೆಸುವ ವಿಚಾರಕ್ಕೆ ಸಂಬಂಧಿಸಿಂತೆ ಸುಪ್ರೀಂ ಕೋರ್ಟ್​ ಮಹತ್ವದ ಆದೇಶವನ್ನು ನೀಡಿದೆ. ಕಲಬುರಗಿ ಹೈಕೋರ್ಟ್‌ ​ ಪೀಠ ಶಿವರಾತ್ರಿ ಪೂಜೆಗೆ ಅನುಮತಿ ನೀಡಿದ ಬೆನ್ನಲ್ಲೇ, ಇದೀಗ ಸುಪ್ರೀಂ ಕೋರ್ಟ್​ ಕೂಡ ಗ್ರೀನ್​​ ಸಿಗ್ನಲ್ ನೀಡಿದೆ. ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಮಹಾಶಿವರಾತ್ರಿಯಂದು ಪೂಜೆ ಸಲ್ಲಿಸಲು ಸುಪ್ರೀಂ ಕೋರ್ಟ್ ಸಂಪೂರ್ಣ ಅನುಮತಿ ನೀಡಿದೆ.

ಈ ಹಿನ್ನೆಲೆಯಲ್ಲಿ ಶಿವರಾತ್ರಿ ವೇಳೆ ಆಲಂದದಲ್ಲಿ ಪೊಲೀಸರು ಕಟ್ಟೆಚ್ಚರಕ್ಕೆ ಸಿದ್ಧತೆ ನಡೆಸಿದ್ದಾರೆ.

Home add -Advt


Related Articles

Back to top button