Belagavi NewsBelgaum NewsKarnataka NewsLatestPolitics

*ವಿದ್ಯುತ್ ಅವಘಡದಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ​ಕೋನೆವಾಡಿ ಗ್ರಾಮದ ಭರಮಾ ಗಂಗಾರಾಮ ಪಾವಸೆ ಅವರು ಆಕಸ್ಮಿಕ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದು, ಅವರ ಕುಟುಂಬದ ಸದಸ್ಯರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 5 ಲಕ್ಷ ರೂ. ಪರಿಹಾರ ವಿತರಿಸಿದರು.

ಕುಟುಂಬದ ಭವಿಷ್ಯಕ್ಕೆ ನೆರವಾಗುವ ನಿಟ್ಟಿನಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಶೇಷ ಕಾಳಜಿ ವಹಿಸಿ, ಸರ್ಕಾರದಿಂದ ಮಂಜೂರು ಮಾಡಿಸಿರುವ 5 ಲಕ್ಷ ರೂ. ಮೊತ್ತದ ಚೆಕ್ ನ್ನು ಮೃತರ ಮನೆಗೆ ತೆರಳಿ ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದರು.

Home add -Advt

Related Articles

Back to top button