Belagavi NewsBelgaum NewsKannada NewsKarnataka NewsLatestTravel
*ಪ್ರಯಾಣಿಕರ ಗಮನಕ್ಕೆ: ಫೆ.14 ರಂದು ಬೆಳಗಾವಿಯಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹಾವೇರಿಯಲ್ಲಿ ಜರುಗಲಿರುವ ಸರ್ಕಾರದ ಹಕ್ಕು ಪತ್ರ ವಿತರಣಾ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆತರಲು ವಾಕರಸಾ ಸಂಸ್ಥೆಯ ಬೆಳಗಾವಿ ವಿಭಾಗದಿಂದ 150 ವಾಹನಗಳನ್ನು ಕಂದಾಯ ಇಲಾಖೆಗೆ ಸಾಂಧರ್ಬಿಕ ಒಪ್ಪಂದದ ಮೇಲೆ ಪೂರೈಸಲಾಗುತ್ತಿದೆ.
ಈ ಹಿನ್ನಲೆಯಲ್ಲಿ ದಿನಾಂಕ 14-02-2026 (ಶನಿವಾರ) ರಂದು ಬೆಳಗಾವಿ ವಿಭಾಗದ ವ್ಯಾಪ್ತಿಯ ಸ್ಥಳಗಳಿಗೆ ಸಾರಿಗೆ ಸೌಲಭ್ಯದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ವಾಕರಸಾ ಸಂಸ್ಥೆಯ ಬೆಳಗಾವಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.




