Kannada NewsKarnataka NewsLatest
*BREAKING: ಬೆಳ್ಳಂಬೆಳಿಗ್ಗೆ ಲಾರಿ-ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಬಗ್ಗುವಳ್ಳಿ ಗೇಟ್ ಬಳಿ ಲಾರಿ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಟ್ರ್ಯಾಕ್ಟರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. 13 ಜನರು ಗಂಭೀರವಾಗಿ ಗಾಯಗೊಂಡಿದದರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗ್ರ್ ದಾಖಲಿಸಲಾಗಿದೆ.
ಮೃತರಲ್ಲಿ ಓರ್ವ ಮಾಳಿಗೆಹಟ್ಟಿ ಗ್ರಾಮದ ಮಂಜುನಾಥ್ ಎಂದು ಗುರುತಿಸಲಾಗಿದೆ. ಇನ್ನೋರ್ವನ ಹೆಸರು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.



