Belagavi NewsBelgaum NewsKarnataka NewsPolitics

*2 ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಮಾಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಸಹ್ಯಾದ್ರಿ ನಗರದಲ್ಲಿ ಸುಮಾರು 2 ಕೋಟಿ ರೂ.ಗಳ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುವ ಶ್ರೀ ಮಹಾಬಳೇಶ್ವರ ದೇವಸ್ಥಾನವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಉದ್ಘಾಟಿಸಿದರು.

ಜನರ ನೆಮ್ಮದಿಯೇ ನನಗೆ ಮುಖ್ಯವಾಗಿದ್ದು, ಗ್ರಾಮೀಣ ಕ್ಷೇತ್ರದಲ್ಲಿ 150ಕ್ಕೂ ಹೆಚ್ಚು ದೇವಸ್ಥಾನಗಳನ್ನು ಜೀರ್ಣೋದ್ಧಾರ ಮಾಡಲಾಗಿದೆ. ಇಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಶಿವನ ದೇವಸ್ಥಾನ ನಿರ್ಮಾಣ ಮಾಡಲಾಗಿದ್ದು, ಶಿವರಾತ್ರಿಯ ಸಂದರ್ಭದಲ್ಲೇ ಉದ್ಘಾಟನೆ ಮಾಡುತ್ತಿರುವುದು ಖುಷಿ ತಂದಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಇದೇ ವೇಳೆ ಸಚಿವರ ಹುಟ್ಟು-ಹಬ್ಬದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ವಿಶೇಷ ಪೂಜೆ ಹಾಗೂ ಹೋಮದಲ್ಲಿ ಅವರು ಪಾಲ್ಗೊಂಡು, ನಾಡಿನ ಸುಭೀಕ್ಷೆಗಾಗಿ ಪ್ರಾರ್ಥನೆ ಸಲ್ಲಿಸಿದರು.

Home add -Advt

ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು, ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಸದಸ್ಯರು, ಮೃಣಾಲ್‌ ಹೆಬ್ಬಾಳಕರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related Articles

Back to top button