
ಪ್ರಗತಿವಾಹಿನಿ ಸುದ್ದಿ: ಮನೆಯ ಬಳಿ ಆಟವಾಡುತ್ತಿದ್ದ ಬಾಲಕನೊಬ್ಬ ಚರಂಡಿಗೆ ಬಿದ್ದು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಬೀದರ್ ಜಿಲ್ಲೆಯ ಮಲ್ಲಿಕ್ ಮರ್ಜಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. 5 ವರ್ಷದ ಅವಿನಾಶ್ ಮೃತ ಬಾಲಕ. ಮನೆ ಬಳಿ ಆಟವಾಡುತ್ತಿದ್ದ ಬಾಲಕ ಮನೆ ಮುಂದೆ ಇರುವ ಚಂಡಿಗೆ ಬಿದ್ದು ಸಾವನ್ನಪ್ಪಿದ್ದಾನೆ.
ಶುಕ್ರವಾರ ಸಂಜೆಯಿಂದ ಬಾಲಕ ಕಾಣುತ್ತಿರಲಿಲ್ಲ. ಕಂಗಾಲಾದ ಕುಟುಂಬ ಆತನಿಗಾಗಿ ಹುಡುಕಾಟ ನಡೆಸಿದೆ. ಆದರೂ ಬಾಲಕನ ಸುಳಿವು ಸಿಕ್ಕಿಲ್ಲ. ಇಂದು ಬೆಳಿಗ್ಗೆ ನೋಡಿದಾಗ ಬಾಲಕ ಮನೆ ಮುಂದಿನ ಚಂಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಬಗದಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕಾಗಿಮಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.




